VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 29, 2010

ಚುನಾವಣಾ ಆಯೋಗಗಳಿಗೆ ಹೆಚ್ಚಿನ ಅಧಿಕಾರ: ಭಾರದ್ವಾಜ್ ಸಲಹೆ

ಬೆಂಗಳೂರು, ಮೇ 28: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದಢಗೊಳಿಸಲು ರಾಜ್ಯ ಚುನಾವಣಾ ಆಯೋಗಗಳಿಗೆ ಹೆಚ್ಚಿನ ಸ್ವಾತಂತ್ರ ನೀಡುವ ಅಗತ್ಯವಿದೆ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಚುನಾವಣಾ ಆಯುಕ್ತರ ಸಮ್ಮೇಳನದಲ್ಲಿ ದೀಪ ಬೆಳಗಿಸಿ ಉದ್ಘಾಟಿಸುತ್ತಿರುವ ರಾಜ್ಯಪಾಲ ಎಚ್.ಆರ್.ಭಾರದ್ವಾಜ್.

ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಚುನಾವಣಾ ಆಯುಕ್ತರ ಸಮ್ಮೇಳನಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದ ಅವರು, ಸಂವಿಧಾನಿಕ ಆಶಯದಂತೆ ಕೇಂದ್ರ ಚುನಾವಣಾ ಆಯೋಗದ ಮಾದರಿಯಲ್ಲೆ ರಾಜ್ಯ ಚುನಾವಣಾ ಆಯೋಗಗಳಿಗೆ ಸ್ವಾಯತ್ತತೆ ನೀಡಬೇಕಾಗಿದೆ ಎಂದು ಸಲಹೆ ಮಾಡಿದರು.

ಎಲ್ಲ ಚುನಾವಣಾ ಆಯೋಗಗಳು ಹಣಕಾಸು ನೆರವು ಸೇರಿದಂತೆ ಮತ್ತಿತರ ಸೌಲಭ್ಯಗಳಿಗೆ ರಾಜ್ಯ ಸರಕಾರಗಳನ್ನು ಅವಲಂಬಿಸಿವೆ. ಇದು ಸರಿಯಾದ ಕ್ರಮವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲರು, ಚುನಾವಣಾ ಆಯೋಗಗಳಿಗೆ ಆರ್ಥಿಕ ಸ್ವಾಯತ್ತತೆ ಕಲ್ಪಿಸಬೇಕಾಗಿದೆ.

ಚುನಾವಣಾ ಆಯೋಗಗಳ ಮನವಿಗೆ ಮುನ್ನವೇ ಅಗತ್ಯ ಸಿಬ್ಬಂದಿ ಮತ್ತು ಮೂಲಭೂತ ಸೌಕರ್ಯಗಳನ್ನು ಸರಕಾರಗಳು ಒದಗಿಸಬೇಕು. ಆ ಮೂಲಕ ಸುಗಮವಾಗಿ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.

ರಾಜ್ಯ ಚುನಾವಣಾ ಆಯೋಗಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತಂತೆ ಸಂವಿಧಾನಕ್ಕೆ ತಿದ್ಧುಪಡಿ ಅಗತ್ಯ ಎಂದು ಪ್ರತಿಪಾದಿಸಿದ ಭಾರದ್ವಾಜ್, ಹಣ ಮತ್ತು ತೊಳ್ಬಲದಿಂದ ಕೆಲವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಹುನ್ನಾರ ನಡೆಸಿದ್ದಾರೆ.

ಇದನ್ನು ತಡೆಯುವ ಕೆಲಸವನ್ನು ಚುನಾವಣಾ ಆಯೋಗಗಳು ಮಾಡಬೇಕು. ಪ್ರಜಾತಂತ್ರ ವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆಯಲ್ಲಿ ಜನ ಪ್ರತಿನಿಧಿಗಳು ಪಕ್ಷಾಂತರ ಅಥವಾ ಲಾಭದಾಯಕ ಹುದ್ಧೆ ಹೊಂದಿದ್ದರೆ ಅವರನ್ನು ಅನರ್ಹಗೊಳಿಸಲು ಆಯೋಗಗಳಿಗೆ ಅಧಿಕಾರ ನೀಡಿರುವುದು ಸ್ವಾಗತಾರ್ಹ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಿಗದಿತ ಅವಧಿಯಲ್ಲೆ ನಡೆಸಲು ರಾಜ್ಯ ಚುನಾವಣಾ ಆಯೋಗಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಹೇಳಿದ ರಾಜ್ಯಪಾಲರು, ವಿಧಾನಸಭೆ ಚುನಾವಣೆಗೂ ಮೂರು ತಿಂಗಳ ಮುನ್ನ ರಾಜ್ಯಗಳಲ್ಲಿ ರಾಷ್ಟ್ರಪತಿ ಅಳ್ವಿಕೆ ಜಾರಿ ಉತ್ತಮವಾದ ಕ್ರಮ.

ಅಕ್ರಮಗಳನ್ನು ತಡೆಗಟ್ಟಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಅನುಕೂಲವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಜಾತಂತ್ರ ಬಲಪಡಿಸಲು ನ್ಯಾಯಾಂಗ ವ್ಯವಸ್ಥೆಯ ಮಾದರಿ ಯಲ್ಲೆ ಚುನಾವಣಾ ಆಯೋಗಗಳಿಗೆ ಅಧಿಕಾರ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಚುನಾವಣಾ ಆಯುಕ್ತ ಸಿ.ಆರ್.ಚಿಕ್ಕಮಠ್, ಪಂಜಾಬ್ ರಾಜ್ಯದ ಚುನಾವಣಾ ಆಯುಕ್ತ ಎ.ಕೆ.ದುಬೈ, ಹೊಸದಿಲ್ಲಿ ಚುನಾವಣಾ ಆಯುಕ್ತ ಓ.ಪಿ.ಕೇಳ್ಕರ್ ಮೊದಲಾದವರು ಉಪಸ್ಥಿತರಿದ್ದರು.

No comments: