VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 20, 2010

ಪ್ರಾಮಾಣಿಕರನ್ನು ದುರ್ಬೀನು ಹಾಕಿ ಹುಡುಕಬೇಕು: ಲೋಕಾಯುಕ್ತ


ಇಂದಿನ ಸಮಾಜದಲ್ಲಿ ಪ್ರಾಮಾಣಿಕರನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ಜಯನಗರದಲ್ಲಿ ಅವರು ಆರ್ಥಿಕ ಸಾಕ್ಷರತಾ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದ ಅವರು 1950ರ ಸಮಯದಲ್ಲಿ ಭ್ರಷ್ಟರನ್ನು ವಿಶೇಷ ಕನ್ನಡಕ ಹಾಕಿ ಹುಡುಕಬೇಕಾಗಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಶಿಕ್ಷಣ ಸಂಸ್ಥೆಗಳು ಕೂಡ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸಿವೆ ಎಂದು ವಿಷಾದಿಸಿದ ಅವರು, ಆರ್ಥಿಕ ಸಾಕ್ಷರತಾ ಆಂದೋನದಿಂದಾದರೂ ಭ್ರಷ್ಟಾಚಾರ ಕಡಿಮೆಯಾಗಲಿ ಎಂದು ತಿಳಿಸಿದರು.

ಭ್ರಷ್ಟರನ್ನು, ಅಪ್ರಾಮಾಣಿಕರನ್ನು ಪ್ರೋತ್ಸಾಹಿಸುವುದು ಹೆಚ್ಚಾಗಬಾರದು. ಯುವಕರು ಪರಿಸ್ಥಿತಿಯ ಬದಲಾವಣೆಗೆ ಶ್ರಮಿಸಿ ಸಮಾಜದಲ್ಲಿ ಭ್ರಷ್ಟಾಚಾರ ನಿವಾರಣೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಸಮಾಜದಿಂದ ಭ್ರಷ್ಟಾಚಾರನ್ನು ಕಿತ್ತೊಗೆಯಲೇಬೇಕಾಗಿದೆ. ಅನ್ಯಾಯದ ವಿರುದ್ಧ ಸಿಡಿದೇಳುವ ಭಾವನೆ ಎಲ್ಲರಲ್ಲೂ ಮೂಡಬೇಕಾಗಿದೆ ಎಂದು ಹೇಳಿದರು.

No comments: