VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 30, 2010

ಎಚ್‌ಡಿಕೆಗೆ ಸಚಿವ ಸ್ಥಾನ ನೀಡಿ ಕಾಂಗ್ರೆಸ್ ಉಳಿಬೇಕಾ?: ವಿಶ್ವನಾಥ್

ರಾಜ್ಯದಲ್ಲಿ ಜೆಡಿಎಸ್ ಜತೆಗಿನ ಚುನಾವಣಾ ಮೈತ್ರಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಎಚ್.ವಿಶ್ವನಾಥ್, ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ಲಾಭವಿಲ್ಲ ಎಂದು ತಿಳಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಜೆಡಿಎಸ್ ಜೊತೆ ಕೈಜೋಡಿಸುತ್ತಿರುವ ಬಗ್ಗೆ ಕಿಡಿಕಾರಿದರು. ಎಚ್.ಡಿ.ಕುಮಾರಸ್ವಾಮಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಜೊತೆಗಿನ ಮೈತ್ರಿಗೆ ಕಾಂಗ್ರೆಸ್‌ನಲ್ಲಿ ಇರುವ ಕೆಲವು ಮುಂಚೂಣಿ ನಾಯಕರ ಆಟಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದು ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಹರಿಹಾಯುವ ಮೂಲಕ ವಿವಾದ ಹುಟ್ಟುಹಾಕಲು ಮುಂದಾಗಿದ್ದಾರೆ.

ಜೆಡಿಎಸ್ ರಾಜ್ಯದಲ್ಲಿ ನೆಲೆ ಇಲ್ಲದ ಪಕ್ಷ, ಅಂತಹ ಪಕ್ಷದೊಂದಿಗೆ ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಬೇಕಾದ ಅವಶ್ಯಕತೆ ಏನಿದೆ ಎಂದು ವಿಶ್ವನಾಥ್ ಗಂಭೀರವಾಗಿ ಪ್ರಶ್ನಸಿದ್ದಾರೆ.

No comments: