VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 16, 2010

ಮಂಗಳೂರು ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ


ಗಣ್ಯರಿಂದ ಇತಿಹಾಸದ ಮೆಲುಕು...

1951ರಲ್ಲಿ ಬಜಪೆ ವಿಮಾ ನಿಲ್ದಾಣವನ್ನು ಜವಾಹರಲಾಲ್ ನೆಹರೂ ಉದ್ಘಾಟಿಸಿದಾಗ ನನಗೆ 10 ವರ್ಷ. ನೆಹರು ಅವರನ್ನು ನೋಡಲು ಕಾರ್ಯಕ್ರಮಕ್ಕೆ ಬಂದಿದ್ದೆ - ಆಸ್ಕರ್ ಫೆರ್ನಾಂಡಿಸ್(ಸಂಸದ)
ಮಂಗಳೂರು ವಿಮಾನ ನಿಲ್ದಾಣದ ಉದ್ಘಾಟನೆಗೆ ನೆಹರೂ ಬಂದಿದ್ದಾಗ ನಾನು ಸಣ್ಣ ಹುಡುಗನಾಗಿದ್ದೆ. ಮೂಡಬಿದ್ರೆಯಿಂದ ಸೈಕಲಲ್ಲಿ ಕಷ್ಟಪಟ್ಟು ಬಂದಿದ್ದೆ - ಎಂ. ವೀರಪ್ಪ ಮೊಯ್ಲಿ (ಕೇಂದ್ರ ಕಾನೂನು ಸಚಿವ)
ವೀರಪ್ಪ ಮೊಯ್ಲಿಯವರ ವಿಮಾನ ಅಪಘಾತದಲ್ಲಿ ಸಿಲುಕಿದ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ತುಂಬಾ ಕಿರಿದಾಗಿತ್ತು - ಪ್ರಫುಲ್ ಪಟೇಲ್( ಕೇಂದ್ರ ನಾಗರಿಕ ವಿಮಾನ ಯಾನ ಸಚಿವ)


ಮಂಗಳೂರು, ಮೇ 15: ಮಂಗಳೂರು ವಿಮಾನ ನಿಲ್ದಾಣದ ನೂತನ ಏಕೀಕೃತ ಟರ್ಮಿನಲ್ ಕಟ್ಟಡವನ್ನು ಕೆಂಜಾರಿನಲ್ಲಿ ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಪ್ರಫುಲ್ ಪಟೇಲ್ ಇಂದು ಉದ್ಘಾಟಿಸಿದರು.

ಮಂಗಳೂರು ವಿಮಾನ ನಿಲ್ದಾಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಹೆಚ್ಚುವರಿ 100 ಕೋಟಿರೂ. ಅನುದಾನವನ್ನು ಕೇಂದ್ರ ಸರಕಾರದಿಂದ ಬಿಡುಗಡೆ ಮಾಡಲಾಗುವುದು ಎಂದವರು ಈ ಸಂದರ್ಭ ತಿಳಿಸಿದರು.
ಭಾರತದ ವಿಮಾನ ನಿಲ್ದಾಣ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಒಂಬತ್ತನೆ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿ ಸುಸಜ್ಜಿತ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಯೊಂದಿಗೆ ದೇಶದಲ್ಲಿ ಅಗ್ರಸ್ಥಾನಕ್ಕೆ ಏರಲಿದೆ. ಈ ನಿಟ್ಟಿನಲ್ಲಿ ದೇಶದ ಬಹುತೇಕ ವಿಮಾನ ನಿಲ್ದಾಣಗಳ ಅಭಿವದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಖಾಸಗಿ ಸರಕಾರಿ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣಗಳ ಅಭಿವದ್ಧಿಯಾಗು ತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರ ನೀಡುತ್ತಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಶೀಘ್ರದಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಅಭಿವೃದ್ಧಿ ಹೊಂದಲು ಸಹಕಾರ ನೀಡಲಾಗುವುದು ಎಂದು ಪಟೇಲ್ ತಿಳಿಸಿದರು.


ಮಂಗಳೂರು ವಿಮಾನ ನಿಲ್ದಾಣವನ್ನು ದೇಶದಲ್ಲೇ ಅತ್ಯುತ್ತಮ ಉನ್ನತ ದರ್ಜೆಯ ವಿಮಾನ ನಿಲ್ದಾಣವಾಗಿ ಮಾರ್ಪಡಿಸುವ ಇಂಗಿತ ಹೊಂದಿರುವುದಾಗಿ ಪಟೇಲ್ ತಿಳಿಸಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಮಂಗಳೂರು ವಿಮಾನ ನಿಲ್ದಾಣದ ಅಭಿವದ್ಧಿಗೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳನ್ನು ಮುಂದುವರಿಸಿ, ಅವರ ಸೇವೆಯನ್ನು ಪಡೆದುಕೊಳ್ಳಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಷ್ಣ ಜೆ. ಪಾಲೆಮಾರ್ ತಿಳಿಸಿದರು.


ಮಂಗಳೂರು ವಿಮಾನ ನಿಲ್ದಾಣದ ಮೂಲಕ ನೇರವಾಗಿ ಹಜ್ಜ್ ಯಾತ್ರೆ ಸಾಧ್ಯವಾಗಿದೆ. ಮುಂದಿನ ಹಂತದಲ್ಲಿ ಸೌದಿಗೆ ಇಂಡಿಯನ್ ಏರ್‌ಲೈನ್ಸ್ ಸೇವೆ ಶೀಘ್ರವಾಗಿ ದೊರಕಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ತಿಳಿಸಿದರು.
ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಭಯಚಂದ್ರ ಜೈನ್, ಮೇಯರ್ ರಜನಿ ದುಗ್ಗಣ್ಣ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ವಿ.ಪಿ. ಅಗರ್‌ವಾಲ್, ಪ್ರಾದೇಶಿಕ ಕಾರ್ಯನಿರ್ವಾಹಕ ನಿರ್ದೇಶಕ ದೇವರಾಜ್ ಮೊದಲಾದವರು ಉಪಸ್ಥಿತರಿದ್ದರು.

ಸೂಕ್ತ ಸಹಾಯ ನೀಡಲು ಸಿದ್ಧ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಸಿಎಂ ಮಂಗಳೂರು ವಿಮಾನ ನಿಲ್ದಾಣವನ್ನು ಬೆಂಗಳೂರು ಬಳಿಕ ಎರಡನೆ ಉನ್ನತ ದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಬೇಕಾದ ಸಂಪರ್ಕ, ರಸ್ತೆ ಅಭಿವದ್ಧಿಗೆ ರಾಜ್ಯ ಸರಕಾರದಿಂದ ಸೂಕ್ತ ಸಹಕಾರ ನೀಡಲಾಗುವುದು. ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿರುವ ಸಂದರ್ಭದಲ್ಲಿ ನೂತನ ಟರ್ಮಿನಲ್ ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ ಎಂದು ಯಡಿಯೂರಪ್ಪ ತಿಳಿಸಿದರು.


ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿದೆ: ಮೊಯ್ಲಿ
ಮಂಗಳೂರು ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗುಣಮಟ್ಟವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಘೋಷಣೆಯನ್ನು ಕೇಂದ್ರ ವಿಮಾನ ಯಾನ ಸಚಿವರು ಮುತುವರ್ಜಿ ವಹಿಸಬೇಕು ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ತಿಳಿಸಿದರು.
ಕರಾವಳಿಯ ಮೂಲಭೂತ ಸೌಕರ್ಯಗಳ ಅಭಿವದ್ಧಿಯಲ್ಲಿ ಪ್ರಮುಖ ಕೊಡುಗೆ ನೀಡಿದ ಮಾಜಿ ಸಂಸದ ಶ್ರೀನಿವಾಸ ಮಲ್ಯರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾಗಿದೆ. ಮಂಗಳೂರು ವಿಮಾನ ನಿಲ್ದಾಣ ನೆಹರೂ ಕಾಲದಲ್ಲಿ ಆರಂಭವಾಯಿತು. ಆ ಬಳಿಕ ಮನಮೋಹನ್ ಸಿಂಗ್‌ವರೆಗೆ ರಾಜ್ಯದ ವಿವಿಧ ಮುಖ್ಯಮಂತ್ರಿಗಳು ವಿಮಾನ ನಿಲ್ದಾಣದ ಅಭಿವೃದ್ಧಿಗೆ ಗಮನ ಹರಿಸಿದ್ದಾರೆ. 1992ರಲ್ಲೇ ಮಂಗಳೂರು ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಅಭಿವದ್ಧಿಪಡಿಸುವ ಗುರಿ ಹೊಂದಲಾಗಿತ್ತು ಎಂದು ಮೊಯ್ಲಿ ತಿಳಿಸಿದರು.


ದೇಶದಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿದಂತೆ 40 ಸಾವಿರ ಕೋಟಿ ರೂಪಾಯಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ದೇಶದ ಬಂದರುಗಳ ಅಭಿವೃದ್ಧಿಗೆ 900 ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಮಂಗಳೂರಿನಿಂದ-ಚಿಕ್ಕಮಗಳೂರಿಗೆ ಸಂಪರ್ಕಿಸುವ ಇನ್ನೊಂದು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದೆ ಎಂದು ಮೊಯ್ಲಿ ತಿಳಿಸಿದರು.

ಭೂಸ್ವಾಧೀನಪಡಿಸಿಕೊಂಡ ಸಂದರ್ಭದಲ್ಲಿ ಸಂತ್ರಸ್ತರಾದವರಿಗೆ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಬೇಕು. ಮಂಗಳೂರು ಯಾತ್ರಿಕರ ಪ್ರವಾಸ ತಾಣವಾಗಿ ಬೆಳೆಯಲು ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಟಾಸ್ಕ್‌ಫೋರ್ಸ್ ಒಂದನ್ನು ರಚಿಸಬೇಕು ಎಂದು ಸಚಿವ ಮೊಯ್ಲಿ ತಿಳಿಸಿದರು.


ಚತುಷ್ಪಥ ರಸ್ತೆ: ಸಚಿವ ಜನಾರ್ದನ ರೆಡ್ಡಿ
ಮಂಗಳೂರು ವಿಮಾನ ನಿಲ್ದಾಣಕ್ಕೆ ಚತುಷ್ಪಥ ರಸ್ತೆ ಅಭಿವೃದ್ಧಿ ಪಡಿಸುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ 100 ಕಿ.ಮೀ. ವ್ಯಾಪ್ತಿಯೊಳಗೆ ಒಂದು ವಿಮಾನ ನಿಲ್ದಾಣ ಅಭಿವದ್ಧಿ ಪಡಿಸುವ ಗುರಿಯನ್ನು ಸರಕಾರ ಹೊಂದಿದೆ. ಆ ಪ್ರಕಾರ 13 ದೊಡ್ಡ ಪ್ರಮಾಣದ ವಿಮಾನ ನಿಲ್ದಾಣ 10 ಜಿಲ್ಲೆಗಳಲ್ಲಿ ಏರ್‌ಸ್ಕ್ರಿಪ್ ಪಡಿಸಲಾಗುವುದು. ಇದಕ್ಕಾಗಿ ಸರಕಾರದಿಂದ ಭೂಸ್ವಾಧೀನ ಹಣ ಭರಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಹಾಗೂ ಮೂಲಭೂತ ಸೌಕರ್ಯ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು.

No comments: