VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 25, 2010

ರಾಜ್ಯಪಾಲರನ್ನು ಭೇಟಿಯಾಗಲಾರೆ: ರೆಡ್ಡಿ ತಿರುಗೇಟು

ಅಕ್ರಮ ಗಣಿಗಾರಿಕೆ ವಿಷಯ ಕುರಿತಂತೆ ರಾಜ್ಯಪಾಲ ಹಂಸರಾಜ್ ಭರದ್ವಾಜ್ ಹಾಗೂ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ನಡುವೆ ನಡೆಯುತ್ತಿರುವ ಶೀತಲ ಸಮರ ಈಗ ತಾರಕಕ್ಕೇರಿದೆ.

ಯಾವುದೇ ಕಾರಣಕ್ಕೂ ರಾಜ್ಯಪಾಲರ ಬಳಿ ಬಂದು ಅವರು ನೀಡಿರುವ ನೋಟಿಸ್‌ಗೆ ವಿವರಣೆ ನೀಡುವುದಿಲ್ಲ ಎಂದು ಜನಾರ್ದನ ರೆಡ್ಡಿ ಪಟ್ಟು ಹಿಡಿದಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

ಈ ಬಗ್ಗೆ ಕಾನೂನು ಹೋರಾಟ ನಡೆಸಲು ಸಿದ್ಧವಿದ್ದೇನೆ. ನಾವು ನಡೆಸುತ್ತಿರುವ ಗಣಿಗಾರಿಕೆ ಕಾನೂನು ಬದ್ಧವಾಗಿಯೇ ಇದೆ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇಂತಹ ಕಾನೂನು ಸಮರವನ್ನೇ ಗೆದ್ದಿರುವಾಗ ರಾಜ್ಯಪಾಲರು ನೀಡಿರುವ ನೋಟಿಸ್‌ಗೆ ವಿವರಣೆ ನೀಡುವ ಅಗತ್ಯವಿಲ್ಲ ಎಂಬುದು ರೆಡ್ಡಿ ಅಭಿಪ್ರಾಯ.

ಈ ಹಿಂದೆಯೇ ಆದಾಯಕ್ಕಿಂತ ಹೆಚ್ಚಿನ ವರಮಾನ ಹೊಂದಿರುವ ರೆಡ್ಡಿ ಸಹೋದರರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದರು. ಆದರೆ ರಾಜ್ಯಪಾಲರು ನೋಟಿಸ್ ಜಾರಿ ಮಾಡುವ ಅಧಿಕಾರ ಇಲ್ಲ ಎಂಬ ರೆಡ್ಡಿಯವರ ವಾದ ಭಾರಿ ವಿವಾದಕ್ಕೆ ಎಡೆ ಮಾಡಿಕೊಟ್ಟಿತು. ಇದೀಗ ಸಚಿವರ ಹೇಳಿಕೆ ಮತ್ತೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಕಾನೂನು ಮೂಲಕವೇ ನೋಟಿಸ್‌ಗೆ ಉತ್ತರಿಸುವುದಾಗಿ ತಿರುಗೇಟು ನೀಡಿದ್ದಾರೆ.

No comments: