VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 29, 2010

ಕಣ್ಣೂರು: ಇಬ್ಬರು ಬಿಜೆಪಿ ಕಾರ್ಯಕರ್ತರ ಕೊಲೆ

ಕಣ್ಣೂರು, ಮೇ 28: ಸಿಪಿಎಂ ಕಾರ್ಯಕರ್ತರು ನಡೆಸಿದರೆನ್ನಲಾದ ಕಚ್ಚಾ ಬಾಂಬ್ ದಾಳಿ ಮತ್ತು ಚೂರಿ ಇರಿತದಿಂದಾಗಿ ಇಬ್ಬರು ಬಿಜೆಪಿ ಕಾರ್ಯಕರ್ತರು ಕೊಲ್ಲಲ್ಪಟ್ಟಿರುವ ಘಟನೆ ನ್ಯೂ ಮಾಹೆ ಪ್ರದೇಶದಲ್ಲಿ ನಡೆದಿದೆ. ಘಟನೆಯಿಂದ ರಾಜಕೀಯ ಸೂಕ್ಷ್ಮ ಪ್ರದೇಶವಾದ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಪಿಎಂ ಕಾರ್ಯಕರ್ತರ ಕೊಲೆ ಯತ್ನ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಘಟನೆಯಲ್ಲಿ ಬಲಿಯಾದ ಬಿಜೆಪಿ ಕಾರ್ಯಕರ್ತರು ನ್ಯಾಯಾಲಯಕ್ಕೆ ಹಾಜರಾಗಿ ದ್ವಿಚಕ್ರವಾಹನದಲ್ಲಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ದುಷ್ಕರ್ಮಿಗಳು ಮೊದಲು ಬಾಂಬ್ ದಾಳಿ ನಡೆಸಿ ಬಳಿಕ ಇರಿದರೆನ್ನಲಾಗಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಕಲ್ಲಿಕೋಟೆ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ಮೃತಪಟ್ಟನೆನ್ನಲಾಗಿದೆ.

ಮೃತಪಟ್ಟವರನ್ನು ಕೆ.ವಿಜಿತ್(28) ಮತ್ತು ಸಿನೋಜ್(30) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

No comments: