ಬೆಂಗಳೂರು, ಮೇ 16: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದೆ. ಮತ ಎಣಿಕೆಗೆ ರಾಜ್ಯ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆಗಳು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿವೆೆ ಎಂದು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ರವೀಂದ್ರನಾಥ್ ತಿಳಿಸಿದ್ದಾರೆ.
ಆಯಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ-ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭದ್ರತಾ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ನಕ್ಸಲ್ ಪೀಡಿತ ಪಶ್ಚಿಮ ಘಟ್ಟ ಪ್ರದೇಶದಲ್ಲಿನ ಮತ ಎಣಿಕೆ ಕೇಂದ್ರಗಳಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ ಎಂದು ಅವರು ಸುದ್ಧಿಗಾರರಿಗೆ ಹೇಳಿದರು.
ರಾಜ್ಯದ ಒಟ್ಟು 5,474 ಗ್ರಾಮ ಪಂಚಾಯತ್‌ಗಳ 80,159 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆದಿದ್ದು, ಮೊದಲ ಹಂತದಲ್ಲಿ ಶೇ 70ರಷ್ಟು ಮತ್ತು ಎರಡನೆ ಹಂತದಲ್ಲಿ ಶೇ. 71ರಷ್ಟು ಮತದಾನವಾಗಿತ್ತು. ಗ್ರಾ.ಪಂ.ಮತದಾನಕ್ಕೆ ಬ್ಯಾಲೆಟ್ ಪೇಪರ್ ಬಳಕೆ ಮಾಡಿರುವ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಬವಾಗುವ ಸಾಧ್ಯತೆಯಿದೆ ಎಂದು ರವೀಂದ್ರನಾಥ್ ತಿಳಿಸಿದರು.
ಈಗಾಗಲೇ 15 ಜಿಲ್ಲೆಗಳಲ್ಲಿ 32 ಗ್ರಾಮ ಪಂಚಾಯತ್‌ಗಳ 7,878 ಸ್ಥಾನಗಳಿಗೆ ಅವಿರೋಧ ಆಯ್ಕೆಯಾ ಗಿದೆ. ಮತ ಎಣಿಕೆ ಕೇಂದ್ರದ ಪ್ರವೇಶಕ್ಕೆ ಕಟ್ಟುನಿಟ್ಟಿನ ನಿಯಮ ರೂಪಿಸಲಾಗದ್ದು, ಅಭ್ಯರ್ಥಿಯ ಜತೆ ಓರ್ವ ವ್ಯಕ್ತಿಗೆ ಮಾತ್ರ ಎಣಿಕೆ ಕೇಂದ್ರಕ್ಕೆ ಪ್ರವೇಶ ವ್ಯವಸ್ಥೆ ಕಲ್ಪಿಸಲಾಗಿದೆ. ಮತ ಎಣಿಕೆಗೆ ಪ್ರತಿ ಮೇಜಿಗೆ ಒಬ್ಬರಂತೆ ಅಧಿಕಾರಿ ಮತ್ತು ಇಬ್ಬರು ಸಹಾಯಕರನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಯಾವುದೇ ರೀತಿಯ ಗೊಂದಲಗಳಿಗೆ ಅಸ್ಪದ ನೀಡಿದೆ ಸುಗಮವಾಗಿ ಮತ ಎಣಿಕೆ ಕಾರ್ಯ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರುವ ರವೀಂದ್ರನಾಥ್, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗ್ರಾಮ ಪಂಚಾಯತ್ ಫಲಿತಾಂಶ ನಿಚ್ಚಳವಾಗಿ ಹೊರಬೀಳಲಿದೆ ಎಂದು ಅಭಿಪ್ರಾಯಿಸಿದರು.
May 17, 2010
Subscribe to:
Post Comments (Atom)
No comments:
Post a Comment