VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 31, 2010

ಜನತೆಯ ಆಶೋತ್ತರ ಈಡೇರಿಸುವತ್ತ ಹೆಚ್ಚಿನ ಗಮನ: ಸಿಎಂ


ಬೆಂಗಳೂರು, ಮೇ 30: ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸುವತ್ತ ಮುಂದಿನ ದಿನಗಳಲ್ಲಿ ಹೆಚ್ಚಿನ ಗಮನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ರವಿವಾರ ಬಿಜೆಪಿ ಸರಕಾರ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಉತ್ತಮವಾಗಿ ಆಡಳಿತ ಮಾಡಿದ್ದೇವೆ. ಆದರೆ ಇದು ಸಮಾಧಾನವಿಲ್ಲ. ಸಾಧಿಸಬೇಕಾದ್ದು ಬಹಳಷ್ಟಿದ್ದು, ಮುಂದಿನ ಮೂರು ದಿನಗಳಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವತ್ತ ಹೆಚ್ಚಿನ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಸಾಕಷ್ಟು ಅಭಿವದ್ಧಿ ಕೆಲಸಗಳಾಗಿವೆಯಾದರೂ, ಆಗಬೇಕಾದ ಕಾರ್ಯಗಳು ಬಹಳಷ್ಟಿವೆ. ಅಭಿವದ್ಧಿ ಪಥದಲ್ಲಿ ಸಾಗುತ್ತಿರುವುದರಿಂದ ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ ಚಿತ್ರಣ ಬದಲಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಎರಡು ವರ್ಷಗಳ ಆಡಳಿತ ಅವಧಿಯಲ್ಲಿ ಹಲವು ಸರಕಾರ ಏಳು-ಬೀಳುಗಳನ್ನು ಕಂಡರೂ, ಜನತೆಗೆ ನೀಡಿದ ಆಶ್ವಾಸನೆಗಳಲ್ಲಿ ಬಹಳಷ್ಟನ್ನು ಈಡೇರಿಸಲಾಗಿದೆ.

ಇದರಿಂದಲೆ ಹಲವು ಚುನಾವಣೆಗಳಲ್ಲಿ ಮತದಾರರು ಬಿಜೆಪಿಗೆ ಹೆಚ್ಚಿನ ಬೆಂಬಲ ನೀಡಿದ್ದಾರೆ. ನಮ್ಮ ಮೇಲೆ ವಿಶ್ವಾಸವಿಟ್ಟಿರುವ ಜನತೆ ನೆಮ್ಮದಿಯಿಂದ ಜೀವನ ಸಾಗಿಸಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿ ಸುವ ಪ್ರಾಮಾಣಿಕ ಪ್ರಯಾತ್ನ ಮಾಡುವುದಾಗಿ ಅವರು ಹೇಳಿದರು.

ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಹಾಲು ಉತ್ಪಾದಕರಿಗೆ 2 ರೂ. ಸಬ್ಸಿಡಿ, ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಎಲ್ಲ ಯೋಜನೆಗಳನ್ನು ಕಳೆದ ಎರಡು ವರ್ಷಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗಿದೆ ಎಂದು ಅವರು ವಿವರಿಸಿದರು.
ರಾಜ್ಯದ ಜನತೆ ವಿದ್ಯುತ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿ ಸಲು ಹಾಗೂ ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಯೋಜನೆಗಳನ್ನು ರೂಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯ ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸರಕಾರದಲ್ಲಿರುವ ಎಲ್ಲ ಸಚಿವರು ತಮ್ಮ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದು, ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಇದರಿಂದ ಯೋಜನೆಗಳು ಸಕಾಲದಲ್ಲಿ ಜನರಿಗೆ ತಲುಪುತ್ತಿದೆ ಎಂದು ಅವರು ನುಡಿದರು.

ಶತ್ರುಗಳಂತೆ ವರ್ತಿಸುತ್ತಿವೆ: ವಿರೋಧ ಪಕ್ಷದ ನಾಯಕರು ನಮ್ಮ ಸರಕಾರದ ಬಗ್ಗೆ ಟೀಕೆಗಳನ್ನು ಮಾಡುತ್ತಾ, ನಮ್ಮ ಶತ್ರುಗಳಂತೆ ವರ್ತಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಕಿಡಿಕಾರಿದರು.

ನಮ್ಮ ಸರಕಾರ ಕಳೆದ ಎರಡು ವರ್ಷಗಳಲ್ಲಿ ಕೈಗೊಂಡಿರುವ ಅಭಿವದ್ಧಿ ಕಾರ್ಯಗಳ ಬಗ್ಗೆ ವಿರೋಧ ಪಕ್ಷದ ನಾಯಕರು ಅಸಮಾಧಾನ ವ್ಯಕ್ತಪಡಿಸುವುದರ ಬದಲು, ಆಗಿರುವ ಅಭಿವದ್ಧಿ ಕಾರ್ಯಗಳನ್ನು ಕಣ್ತೆರೆದು ನೋಡಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

No comments: