ಶಿವಮೊಗ್ಗ, 19: ಸದ್ಯದಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪಹೇಳಿಕೆ ನೀಡಿದ್ದ ಬೆನ್ನಿಗೇ ಇದಕ್ಕೆ ತದ್ವಿರುದ್ಧವಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಸಚಿವ ಸಂಪುಟ ವಿಸ್ತರಣೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶಿಕಾರಿಪುರ ಪಟ್ಟಣದಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡುವ ಸಂಬಂಧ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆ ಕುರಿತಾದ ಯಾವುದೇ ಪ್ರಸ್ತಾಪವಾಗಿಲ್ಲ ಎಂದರು. ಬಿಜೆಪಿ ನೇತತ್ವದ ಸರಕಾರ ಅಧಿಕಾರಕ್ಕೆ ಬಂದು ಮೇ ಮಾಸಾಂತ್ಯಕ್ಕೆ ಎರಡು ವರ್ಷವಾಗಲಿದೆ.
ಈ ಹಿನ್ನೆಲೆಯಲ್ಲಿ ಜೂನ್ 18ರಂದು ಬೆಂಗಳೂರಿನಲ್ಲಿ ಬಹತ್ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸರಕಾರದ ಎರಡು ವರ್ಷಗಳ ಸಾಧನೆ ಹಾಗೂ ಮುಂದಿನ ಮೂರು ವರ್ಷಗಳಲ್ಲಿ ಮಾಡಬೇಕಾದ ಕೆಲಸಗಳ ಕೈಪಿಡಿಯೊಂದನ್ನು ಬಿಡುಗಡೆ ಮಾಡುವುದಾಗಿ ಹೇಳಿದರು.
ಸಾವಯವ ಕಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಯಾಗುತ್ತಿದೆ. ಸಾವಯವ ಕಷಿಯತ್ತ ರೈತರು ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಮೇ 23ರಂದು ಸಾವಯವ ಕಷಿ ರೈತರ ಸಮಾವೇಶವನ್ನು ಕೂಡಲಸಂಗಮದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಬಂಡವಾಳ ಹೂಡಿಕೆ:
ಜೂನ್ 3 ಮತ್ತು 4ರಂದು ವಿಶ್ವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಬೆಂಗಳೂರಿನಲ್ಲಿ ನಡೆಯಲಿದೆ. ಈಗಾಗಲೇ ಸಮಾವೇಶದ ಯಶಸ್ವಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೇಂದ್ರ ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಸಮಾವೇಶದ ಉದ್ಘಾಟನೆ ಮಾಡಲಿದ್ದಾರೆಂದು ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುಮಾರು 3 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಬಂಡವಾಳ ಹೂಡಿಕೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧ ನಗರಗಳಲ್ಲಿ ಬಂಡವಾಳ ಹೂಡುವಂತೆ ಉದ್ದಿಮೆಗಳ ಮನವೊಲಿಸ ಲಾಗುವುದು. ಜೊತೆಗೆ ಪ್ರವಾಸೋದ್ಯಮ, ಉಕ್ಕು, ಸಿಮೆಂಟ್, ಶೈಕ್ಷಣಿಕ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಆಯನೂರು ಮಂಜುನಾಥ್ ಉಪಸ್ಥಿತರಿದ್ದರು.
May 20, 2010
Subscribe to:
Post Comments (Atom)
No comments:
Post a Comment