ಮಂಡ್ಯ, ಮೇ 19: ಭತ್ತಕ್ಕೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಲು ಮೀನಾ ಮೇಷ ಎಣಿಸುತ್ತಿರುವುದನ್ನು ಖಂಡಿಸಿ ಮೇ 21ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತಸಂದ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸಲಿರುವ ನೂರಾರು ರೈತರು ಸಿಟಿ ರೈಲ್ವೆ ನಿಲ್ದಾಣದಿಂದ ಕಾಲ್ನಡಿಗೆಯಲ್ಲಿ ಸಿಎಂ ನಿವಾಸದವರೆಗೆ ಮೆರವಣಿಗೆ ನಡೆಸಲಿದ್ದಾರೆ ಎಂದರು.
ದಾವಣಗೆರೆ ಮುಂತಾದ ಕಡೆ ಹಲವು ದಿನಗಳಿಂದ ರೈತರು ಭತ್ತದ ಬೆಂಬಲ ಬೆಲೆ ಹೋರಾಟ ನಡೆಸುತ್ತಿದ್ದರೂ ಸರಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ವಿಪಕ್ಷಗಳೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರು ಕಿಡಿಕಾರಿದರು.
ರಾಜ್ಯ ಸರಕಾರ ಕೂಡಲೇ ಭತ್ತಕ್ಕೆ ವೈಜ್ಞಾನಿಕ ಬೆಂಬಲ ನಿಗದಿಪಡಿಸಬೇಕು. ವರ್ಷದ ಎಲ್ಲಾ ಋತುವಿನಲ್ಲೂ ಭತ್ತ ಖರೀದಿ ಕೇಂದ್ರವಿರಬೇಕು. ಅಲ್ಲಿವರೆಗೂ ರೈತರು ಮುಖ್ಯಮಂತ್ರಿ ನಿವಾಸದಿಂದ ಕದಲುವುದಿಲ್ಲ ಎಂದು ಅವರು ಎಚ್ಚರಿಸಿದರು.
ಕಬ್ಬು ದರ ನಿಗದಿಗೆ ಆಗ್ರಹ: ಬರುವ ಜೂನ್‌ನಲ್ಲಿ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವಿಕೆ ಆರಂಭವಾಗಲಿದ್ದು, ಅದಕ್ಕೂ ಮುನ್ನ ಟನ್‌ಗೆ ಕನಿಷ್ಠ 2500 ರೂ. ದರ ನಿಗದಿಪಡಿಸಬೇಕು ಎಂದು ಪುಟ್ಟಣ್ಣಯ್ಯ ಆಗ್ರಹಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಸಭೆ ಕರೆದು ತೀರ್ವಾನ ಕೈಗೊಳ್ಳಬೇಕೆಂದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು.
ಸ್ವಾಗತ:ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್‌ಎಸ್‌ಕೆ)ಯನ್ನು ಮೈಷುಗರ್ ಜತೆ ವಿಲೀನಗೊಳಿಸಿ ಪುನಶ್ಚೇತನಗೊಳಿಸುವ ಸರಕಾರದ ತೀರ್ವಾನ ವನ್ನು ಅವರು ಸ್ವಾಗತಿಸಿದರು.
ಮೈಷುಗರ್ ಜತೆ ವಿಲೀನಗೊಳಿಸುವುದಕ್ಕೆ ಒಲ್ಲದ ಮನಸ್ಸಿನಿಂದ ಒಪ್ಪಿದ್ದೇನೆ ಎಂದು ಸ್ಥಳೀಯ ಶಾಸಕ ಸಿ.ಎಸ್.ಪುಟ್ಟರಾಜು ಅವರು ಹೇಳಿದ್ದಾರೆ. ಹಾಗಾದರೆ ಅವರ ಮನಸಿನ ಭಾವನೆ ಏನು ಎಂಬುದನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಅವರು ತಾಕೀತು ವಾಡಿದರು.
ಪಕ್ಷವೊಂದರ ಕಾರ್ಯಕರ್ತನಿಗೆ ಕಪಾಳ ಮೋಕ್ಷ ವಾಡಿರುವ ಪುಟ್ಟರಾಜುರನ್ನು ಬಂಧಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ತಲೆಮರೆಸಿಕೊಂಡಿದ್ದಾರೆ ಎಂಬ ಸಬೂಬು ಹೇಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂದ ಜಿಲ್ಲಾಧ್ಯಕ್ಷ ಕೋಣಸಾಲೆ ನರಸರಾಜು, ಮುಖಂಡರಾದ ಮರಿಲಿಂಗೇಗೌಡ, ಸುರೇಶ್, ವಿಜಯಕುವಾರ್, ಹನಿಯಂಬಾಡಿ ನಾಗರಾಜು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
May 20, 2010
Subscribe to:
Post Comments (Atom)
No comments:
Post a Comment