ಗಂಗಾವತಿ, ಮೇ 20: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಶೀಘ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದ್ದಾರೆ.
ಗುರುವಾರ ನಗರದ ಅನ್ಸಾರಿ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಅನ್ಸಾರಿ ಹಾಗೂ ಮಾಜಿ ಶಾಸಕ ಬಸವರಾಜ ಹಿಟ್ನಾಳ ಬೆಂಬಲಿತ ಗ್ರಾ.ಪಂ. ಸದಸ್ಯರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದರ ಪರಿಣಾಮವಾಗಿ ಇಂದು 175 ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ರಾಜ್ಯದ ಬಿಜೆಪಿ ಸರಕಾರ ಕೇಸರೀಕರಣಗೊಂಡಿದೆ. ಆರೆಸ್ಸೆಸ್ ಇನ್ನಿತರ ಸಂಘಟನೆಗಳು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಸಾಮರಸ್ಯ ಹಾಳು ಮಾಡುತ್ತಿವೆ ಎಂದು ಅವರು ಆರೋಪಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಯ ಚಿಂತನೆಯಲ್ಲಿದ್ದು, ಬಿಜೆಪಿ ಮತ್ತು ಆರೆಸ್ಸೆಸ್‌ನಂತಹ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ರೇಣುಕಾಚಾರ್ಯ, ಎಚ್.ಹಾಲಪ್ಪ, ಗಣಿ ರೆಡ್ಡಿಗಳಿಂದ ರಾಜ್ಯ ಸರಕಾರಕ್ಕೆ ಕಳಂಕವುಂಟಾಗಿದ್ದು, ಅವರನ್ನು ಸಚಿವ ಮತ್ತು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ವಿರೂಪಾಕ್ಷಪ್ಪ ಆಗ್ರಹಿಸಿದರು.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ, ಜಿ.ಪಂ. ಅಧ್ಯಕ್ಷ ರಾಘವೇಂದ್ರ ಹಿಟ್ನಾಳ ಮಾತನಾಡಿದರು.
ಪಿ. ಅಹ್ಮದಲಿ, ಶರ್ಫುದ್ದೀನ್‌ಸಾಬ್, ಫಕ್ರುದ್ದೀನ್ ಸಾಬ್, ನಗರಸಭೆ ಸದಸ್ಯರಾದ ಮುಹಮ್ಮದ್ ಫಾರೂಕ್‌ಸಾಬ್, ಶೇಖ್ ನಬೀಸಾಬ್ ಮತ್ತಿತರರು ಹಾಜರಿದ್ದರು.
May 21, 2010
Subscribe to:
Post Comments (Atom)
No comments:
Post a Comment