VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 30, 2010

ಯಡಿಯೂರಪ್ಪ ಉತ್ತರ ಕುಮಾರ: ಸಿದ್ದರಾಮಯ್ಯ ವ್ಯಂಗ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರ ಕುಮಾರ ಎಂದು ವ್ಯಂಗ್ಯವಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿಗಳ ಪಾಲು ಇದೆ ಎಂದು ಮತ್ತೊಮ್ಮೆ ಆರೋಪಿಸಿದ್ದಾರೆ.

ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿಗಳ ಪಾಲು ಇರುವುದರಿಂದ ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ದೂರಿದರು.

ಹಾಗಾಗಿ ಸಾರ್ವಜನಿಕವಾಗಿ ಮಾತನಾಡುವಾಗ ಉತ್ತರ ಕುಮಾರನಂತೆ ಮಾತನಾಡುವ ಮುಖ್ಯಮಂತ್ರಿಗಳು, ಸಂಪುಟದ ಸಚಿವರು ಮತ್ತು ಶಾಸಕರಿಗೆ ಮುಖ್ಯಮಂತ್ರಿಗಳ ಕೃಪಾಕಟಾಕ್ಷವಿದೆ ಎಂದರು.

ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರೊಂದಿಗೆ ನವದೆಹಲಿಯಲ್ಲಿ ಚರ್ಚೆ ನಡೆಸಿ ವಾಪಸ್ಸಾದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

No comments: