VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 30, 2010

ಮುಂದಿನ ವಾರ ಬಲಗಾಲಿಡಲಿದೆ ಮುಂಗಾರು

ಬೆಂಗಳೂರು, ಮೇ. 29 : ಮುಂಗಾರುಮಳೆ ಜೂನ್ ಮೊದಲ ವಾರದಲ್ಲಿ ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆಯಿದೆ. ನೈಋತ್ಯ ಮುಂಗಾರು ಮಾರುತಗಳು ಸೋಮವಾರ ಕೇರಳವನ್ನು ಪ್ರವೇಶಿಸುತ್ತಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಕೆಲವು ಭಾಗಗಳತ್ತ ಮುನ್ನಡೆಯಲಿದೆ. ಪರಿಣಾಮವಾಗಿ ಮೇ 30, 31 ರಂದು ಕೇರಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲೂ ಮಳೆಗಾಲ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸಲದ ಮುಂಗಾರು ಬೇಆಪ್ ಬೆಂಗಾಲದ ಮೂಲಕ ಮೇ 17 ರಂದು ದೇಶವನ್ನು ಪ್ರವೇಶಿಸಿದೆ. ಮಂಗಳವಾರ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಿಗೆ ಅಧಿಕೃತವಾಗಿ ಮುಂಗಾರು ಎಂಟ್ರಿ ಪಡೆದುಕೊಳ್ಳಲಿದೆ. ಈಗಾಗಲೇ ಕೇರಳದಲ್ಲಿ ತಂಪಾದ ಗಾಳಿ ಬೀಸತೊಡಗಿದ್ದು, ತಮಿಳುನಾಡು ಮತ್ತು ಕರ್ನಾಟಕದಲ್ಲಿರುವ ಬಿಸಿಲಿನ ತಾಪ ಸ್ವಲ್ಪ ಪ್ರಮಾಣದಲ್ಲಿ ತಗ್ಗಲಿದ್ದು, ಜೂನ್ ಮೊದಲ ವಾರ ಮಳೆ ಆರ್ಭಟ ಶುರುವಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಬಿಸಿಲಿನ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ತಲುಪಿತ್ತು. ತಮಿಳುನಾಡು, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಜನರು ಬಿಸಿಲಿಲ ಹೊಡೆತಕ್ಕೆ ತತ್ತರಿಸಿಹೋಗಿದ್ದಾರೆ. ಮುಂಬರುವ ದಿನಗಳಲ್ಲಿ ಬಿಸಿಲಿನ ಪ್ರಖರ ಇಳಿಮುಖಗೊಳ್ಳಲಿದೆ. ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

No comments: