ಶಿವಮೊಗ್ಗ, ಮೇ 19: ಹೊಗೇನಕಲ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಮಟ್ಟದಲ್ಲಿ ಚರ್ಚೆ ನಡೆಯಲಿದೆ. ಚರ್ಚೆಯ ನಂತರ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿಕಾರಿಪುರ ಪಟ್ಟಣದಲ್ಲಿಂದು ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯ ಕಾರ್ಯದರ್ಶಿಗಳು ಚರ್ಚೆ ಮಾಡುವವರೆಗೂ ಹೊಗೇನಕಲ್ ವಿವಾದದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದರು.
ಹೊಗೇನಕಲ್‌ನಲ್ಲಿ ತಮಿಳುನಾಡು ರಾಜ್ಯ ಕೈಗೊಂಡಿರುವ ಯೋಜನೆ ಸ್ಥಗಿತಕ್ಕೆ ಮನವಿ ಮಾಡಿದ ಸುಪ್ರೀಂಕೋರ್ಟ್‌ಗೆ ಕರ್ನಾಟಕ ರಾಜ್ಯ ಮನವಿ ಸಲ್ಲಿಸಲಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ, ಮುಖ್ಯಮಂತ್ರಿಯವರು ಸ್ಪಷ್ಟ ಉತ್ತರ ನೀಡಲಿಲ್ಲ. ಎರಡು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಚರ್ಚೆಯ ನಂತರ ಮುಂದಿನ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದಷ್ಟೆ ಉತ್ತರಿಸಿದರು.
Subscribe to:
Post Comments (Atom)
No comments:
Post a Comment