VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 22, 2010

ಮಂಗಳೂರಿನಲ್ಲಿ ಭೀಕರ ವಿಮಾನ ದುರಂತ : ಭಾರೀ ಸಾವು-ನೋವು ಸಂಭವಿಸಿರುವ ಸಾಧ್ಯತೆ

ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ

ಸುಮಾರು 172 ಪ್ರಯಾಣಿಕರು ವಿಮಾನದಲ್ಲಿದ್ದರು





ಮಂಗಳೂರು, ಮೇ 22: ಶನಿವಾರ ಬೆಳಗ್ಗೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಭೀಕರ ವಿಮಾನ ದುರಂತವೊಂದು ಇಲ್ಲಿನ ಮಂಗಳೂರು (ಬಜ್ಪೆ) ವಿಮಾನ ನಿಲ್ದಾಣದಲ್ಲಿ ನಡೆದಿದೆ.ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದ್ದು, ಭಾರೀ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ.

ಬೆಳಗ್ಗೆ 6:30ರ ಸುಮಾರಿಗೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣದ ರನ್‌ವೇಗೆ ಬಂದಿಳಿದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತಕ್ಷಣ ನಿಯಂತ್ರಣ ಕಳೆದುಕೊಂಡು ನಿಲ್ದಾಣದ ಪಕ್ಕದ ಕಣಿವೆಗೆ ಉರುಳಿದೆ. ಉರುಳುತ್ತಲೇ ಬೆಂಕಿ ಹತ್ತಿಕೊಂಡ ವಿಮಾನ ಹೆಚ್ಚು ಕಡಿಮೆ ಸಂಪೂರ್ಣ ಸುಟ್ಟು ಹೋಗಿದೆ. ವಿಮಾನದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 172 ಪ್ರಯಾಣಿಕರಿದ್ದರು.







ವಿಮಾನ ನಿಲ್ದಾಣದ ಮೂಲಗಳ ಪ್ರಕಾರ ಒಬ್ಬ ವ್ಯಕ್ತಿಯನ್ನು ತಕ್ಷಣ ಬಚಾವ್ ಮಾಡಲಾಗಿದ್ದು, ಆತ ದುರಂತದ ತೀವ್ರತೆಯಿಂದ ಆಘಾತಗೊಂಡಿದ್ದರೂ ಅಪಾಯದಿಂದ ಪಾರಾಗಿದ್ದಾನೆ. ಒಂದು ಮಗುವನ್ನು ರಕ್ಷಣಾ ಕಾರ್ಯಕರ್ತರು ವಿಮಾನದಿಂದ ಹೊರತೆಗೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆದರೆ ಮಗುವಿನ ಪರಿಸ್ಥಿತಿಯ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ವಿಮಾನದಲ್ಲಿರುವ ಪ್ರಯಾಣಿಕರನ್ನು ರಕ್ಷಿಸಲು ಅಗ್ನಿಶಾಮಕ ಪಡೆ ಭಾರೀ ಪ್ರಯತ್ನ ನಡೆಸುತ್ತಿದೆಯಾದರೂ ಪ್ರಯಾಣಿಕರು ಬದುಕುಳಿದಿರುವ ಸಾಧ್ಯತೆ ಬಹಳ ಕಡಿಮೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.






ಬಜ್ಪೆ ಬಳಿಯ ಪಾವೂರು ಸಮೀಪದ ನೂತನ ವಿಮಾನ ನಿಲ್ದಾಣವಿರುವ ಪ್ರದೇಶದ ಕೆಳಭಾಗದ ಕಣಿವೆಯಲ್ಲಿ ಸದ್ಯ ಈ ವಿಮಾನದ ಅವಶೇಷಗಳು ಇವೆ.
ಸಂಸದ ನಳಿನ್ ಕುಮಾರ್ ಕಟೀಲ್, ಐಜಿಪಿ ಗೋಪಾಲ್ ಹೊಸೂರು ಮತ್ತಿತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.ವಿಮಾನ ನಿಲ್ದಾಣದಲ್ಲಿ ಇತರ ಎಲ್ಲ ವಿಮಾನಗಳ ಹಾರಾಟವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದ್ದು, ರಕ್ಷಣಾ ಸಿಬ್ಬಂದಿಯಿಂದ ರನ್‌ವೇ ಪರಿಶೀಲನೆ ನಡೆದ ಬಳಿಕ ಇತರ ವಿಮಾನಗಳ ಹಾರಾಟದ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

No comments: